ನವದೆಹಲಿ :–
ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ನಿಗಮ – ಮಂಡಳಿಗಳಿಗೆ ನೇಮಕ ಸಂಬಂಧ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯವನ್ನು ನೀಡಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವನ್ನು ತೆಗೆದುಕೊಳ್ಳಲಿದೆ.
“ವಿಧಾನ ಪರಿಷತ್ತಿಗೆ ನಾಮನಿರ್ದೇಶನ ವಿಧಾನ ಮಂಡಲದ ಅಧಿವೇಶನಕ್ಕೆ” ಮುನ್ನವೇ ಆಗಬಹುದು.
ಭಾರತ ಸರ್ಕಾರವು ಯೂರಿಯಾ ಮತ್ತಿತರ ರಸಗೊಬ್ಬರಗಳನ್ನು ಎಲ್ಲಾ ರಾಜ್ಯಗಳಿಗೆ ಸರಬರಾಜು ಮಾಡಬೇಕು. ಈ ವರ್ಷ ಭಾರತ ಸರ್ಕಾರವು ಸರಬರಾಜು ಮಾಡಿರುವ ರಸಗೊಬ್ಬರವು ಸಾಕಾಗುತ್ತಿಲ್ಲ. ಏಕೆಂದರೆ ರಾಜ್ಯದಲ್ಲಿ ಮುಂಗಾರು ಅವಧಿಗೂ ಮುನ್ನವೇ ಪ್ರಾರಂಭವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಿತ್ತನೆ ಈ ವರ್ಷ ಹೆಚ್ಚಾಗಿದೆ. ಜಲಾನಯನ ಪ್ರದೇಶಕ್ಕೆ ನೀರನ್ನು ಈಗಾಗಲೇ ಹಾಯಿಸಲಾಗಿದೆ. ಹಾಗಾಗಿ ರೈತರು ಹೆಚ್ಚು ರಸಗೊಬ್ಬರವನ್ನು ಬಳಸುತ್ತಿದ್ದಾರೆ. “ಹಾಗೆಂದು ನಮ್ಮ ಬಳಿ ರಸಗೊಬ್ಬರವಿಲ್ಲ ಎಂದೇನಲ್ಲ”. ಆದರೆ ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರದ ಅಗತ್ಯವಿದೆ. ಸರ್ಕಾರದ ಬಳಿ ರಸಗೊಬ್ಬರವಿಲ್ಲ ಎಂಬ ತಪ್ಪು ಕಲ್ಪನೆ ರೈತರಲ್ಲಿ ಮೂಡಿದ್ದು, ಚಳವಳಿ ಪ್ರಾರಂಭಿಸಿದ್ದಾರೆ. ಯೂರಿಯಾ ಮತ್ತಿತರ ರಾಸಾಯನಿಕ ರಸಗೊಬ್ಬರ ಲಭ್ಯವಿದ್ದು, ಹೆಚ್ಚಿನ ಗೊಬ್ಬರದ ಅವಶ್ಯಕತೆ ಇದೆ ಎಂದು @JPNadda ಅವರಿಗೆ ಪತ್ರ ಬರೆಯಲಾಗಿದೆ.
ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ವರದಿಯನ್ನು ಸರ್ಕಾರ ಅಂಗೀಕರಿಸಿದೆ. ಕೆ.ಎಸ್.ಸಿ.ಎ ಹಾಗೂ ಡಿಎನ್ಎ, ಆರ್.ಸಿ.ಬಿ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗಿದೆ.
ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು, ಎಸ್. ಪಿ ಹಾಗೂ ಎಸಿಪಿ ಹಾಗು ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನ್ಯಾ.ಮೈಕಲ್ ಕುನ್ಹಾ ಅವರ ವರದಿಯನುಸಾರ ಸರ್ಕಾರವು ಶಿಸ್ತಿನ ಕ್ರಮವನ್ನು ಜರುಗಿಸಿದೆ ಎಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.