ಚಿಕ್ಕೋಡಿ :–
ಹಬ್ಬಗಳು ಮನುಷ್ಯನ ಪ್ರಗತಿಗೆ ಪೂರಕವಾಗಿದ್ದರೂ ಕೆಲವು ಆಚರಣೆಗಳು ಮೂಢನಂಬಿಕೆಗೆ ಪ್ರಚೋದನೆ ನೀಡುತ್ತಿವೆ ಇದನ್ನು ಹೋಗಲಾಡಿಸಲು ನಾಗರ ಪಂಚಮಿಯಂದು ತಾಲುಕಿನ ಮಾಂಜರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮಕ್ಕಳಿಗೆ ಹಾಲನ್ನು ವಿತರಿಸುವ ಮೂಲಕ ಬಸವ ಪಂಚಮಿಯನ್ನಾಗಿ ಆಚರಿಸಲಾಗುತ್ತದೆ ಎಂದು ಸಾಮಾಜಿಕ ಚಿಂತಕ ಸಿದ್ದಾರ್ಥ್ ಗಾಯಗೋಳ ಹೇಳಿದರು.

ಗ್ರಾಮದಲ್ಲಿ ಕಳೆಂದ ದಿನಾಂಕ 29 ರಂದು ಮಾನವ ಬಂದತ್ವ ವೇದಿಕೆ. ಅಂಬೇಡ್ಕರ ಕಲಾ ಮತ್ತು ಕ್ರೀಡಾ ಯುವಕ ಮಂಡಳ ಮಾಂಜರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮಾಂಜರಿ ಇವರ ಸಹಯೋಗದಲ್ಲಿ ನಾಗರ ಪಂಚಮಿ ಹಬ್ಬದ ನಿಮಿತ್ಯ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು
ಹುತ್ತಕ್ಕೆ ಹಾಲು ಸುರಿದು ಅವೈಜ್ಞಾನಿಕವಾಗಿ ಆಚರಣೆಗೆ ಜನರು ಮುಂದಾಗುತಾರೆ ಇದರಿಂದ ಅಪಾರ ಪ್ರಮಾಣ ಹಾಲು ವ್ಯರ್ಥವಾಗುತ್ತಿದೆ ನಮ್ಮ ರಾಜ್ಯವೂಂದರಲ್ಲೇ ಪ್ರತಿ ವರ್ಷ ಅಪೌಷ್ಟಿಕತೆಯಿಂದ ಸಾವಿರಾರು ಮಕ್ಕಳು ಸಾವಿಗೀಡಾಗುತ್ತಿದಾರೆ ಹಾಲನ್ನು ವ್ಯರ್ಥ ಮಾಡುವ ಬದಲಿಗೆ ಮಕ್ಕಳಿಗೆ ಮತ್ತು ಬಡವರಿಗೆ ಹಾಲು ಕೊಟ್ಟರೆ ಅದು ಅವಶ್ಯಕವಾಗುತ್ತದೆ ಈ ಕುರಿತು ಜನರು ಚಿಂತಿಸಬೇಕು ಎಂದರು
ಈ ಸಂದಭ೯ದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಧಾನಗುರುಗಳಾದ ಬಿ.ಬಿ.ಶಿರಗುಪ್ಪಿ ವಹಿಸಿದರು ಥಳು ಕುರಣೆ
ರವಿಂದ್ರ ವಡವಡೆ, ರಮೇಶ ಗುರವ,ಚಿದಾನಂದ ಕಾಂಬಳೆ , ರವಿ ಈರಾಯಿ ,ರಾಮು ಕುರಣೆ ಸೇರಿದಂತೆ ಯುವಕ ಮಂಡಳದ ಸಧಸ್ಯರು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಈ ಸಂದಭ೯ದಲ್ಲಿ ಕಾರ್ಯಕ್ರಮವನ ರಾಘವೇಂದ್ರ ಲಂಬುಗೋಳ ನಿರೂಪಿಸಿ ಸ್ವಾಗತಿಸಿ ವಂದಿಸಿದರು.