ಬೆಂಗಳೂರು :–
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದಲ್ಲಿ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವರದಿಯಾಗಿದೆ.
ದೇಸಾಯಿ ಅವರು ಗುರುವಾರ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ.
ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿದ್ದರಾಮಯ್ಯರ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ವರದಿ ಹೇಳಿದೆ.





