ನಿಪ್ಪಾಣಿ :–
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರೊಂದಿಗೆ ನಾವಿದ್ದೇವೆ.
ಇಂದು ನಿಪ್ಪಾಣಿ ನಗರದಲ್ಲಿ ನಾಡಿನ ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಹಿಂದೂಗಳ ಆಧ್ಯಾತ್ಮಿಕ ಹಾಗೂ ಭಾವನಾತ್ಮಕ ಪುಣ್ಯಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮತ್ತು ಅಪಪ್ರಚಾರವನ್ನು ಖಂಡಿಸಿ, ಹಿಂದೂ ವಿರೋಧಿ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿರುವುದು ಖಂಡಿಸಿ,ಭಕ್ತವೃಂದ ಜೊತೆಗೂಡಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸತ್ಯದ ಬಾಗಿಲು ತೆರೆಯಲಿದೆ, ಧರ್ಮಸ್ಥಳದ ಧರ್ಮದ ಬೆಳಕು ಬೆಳಗಲಿದೆ. ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಜಿ ಹಾಗೂ ಶ್ರೀಕ್ಷೇತ್ರದ ಜೊತೆ ನಾವಿದ್ದೇವೆ. ಶ್ರೀಕ್ಷೇತ್ರವನ್ನು ಅಪವಿತ್ರಗೊಳಿಸಲು ನಾವು ಬಿಡುವುದಿಲ್ಲ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಷಡ್ಯಂತ್ರಗಳಿಗೆ ರಾಜ್ಯ ಸರ್ಕಾರ ಧರ್ಮಸ್ಥಳದ ಹೆಸರಿನಲ್ಲಿ ಆಸಕ್ತ ಹಿತಾಸಕ್ತಿಗಳು ಸೃಷ್ಟಿಸಿರುವ ಗೊಂದಲಕ್ಕೆ ಅಂತಿಮ ತೆರೆ ಎಳೆಯುವ ನಿಟ್ಟಿನಲ್ಲಿ ಈವರೆಗಿನ SIT ತನಿಖೆಯ ವರದಿಯನ್ನು ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು,ಮಹಿಳಾ ಮೋರ್ಚಾ,ಯುವ ಮೋರ್ಚಾ ಸದಸ್ಯರು,ನೂರಾರು ಧರ್ಮಸ್ಥಳ ಭಕ್ತರು ಉಪಸ್ಥಿತರಿದ್ದರು.





