ಬೆಂಗಳೂರು :–
ಕುರಿಗಾಹಿಗಳ ಮೇಲಿನ ದೌರ್ಜನ್ಯ, ಶೋಷಣೆ ತಡೆದು ಆ ವರ್ಗಕ್ಕೆ ಕಲ್ಯಾಣ ಮಂಡಳಿ ಸ್ಥಾಪಿಸಿ,
ಯೋಜನೆಗಳ ಜಾರಿಗೆ ‘ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕಾರ್ಯಕ್ರಮಗಳು ಮತ್ತು ದೌರ್ಜನ್ಯ ತಡೆ) ಮಸೂದೆ-೨೦೨೫ ರ ಕರಡನ್ನು ಕಾನೂನು ಮತ್ತು ಸಂಸದೀಯ ಇಲಾಖೆ ಅಂತಿಮಗೊಳಿಸಿದೆ.

ಮಸೂದೆಯನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.
ಸದ್ಯ ನಡೆಯುತ್ತಿರುವ ಅಧಿವೇಶನದಲ್ಲಿಯೇ ಮಸೂದೆಗೆ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿವೆ.