“ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಣೆ”

ಬೆಂಗಳೂರು :–

ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

2023ರ ಫೆಬ್ರವರಿ 11ರವರೆಗೆ ದಾಖಲಾದ ಪ್ರಕರಣಗಳಿಗೆ ದಂಡ ಕಟ್ಟದ ವಾಹನ ಮಾಲೀಕರಿಗೆ ಮಾತ್ರ ಈ ಅವಕಾಶ ನೀಡಲಾಗಿದೆ.

ಶೇ.50ರಷ್ಟು ದಂಡ ಪಾವತಿ ಮಾಡಲು ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ.

ಬೆಂಗಳೂರು ಒನ್ ಸೆಂಟರ್ ವೆಬ್‌ಸೈಟ್‌, ಪೇಟಿಎಂ ಆ್ಯಪ್, ಸಂಚಾರ ಪೊಲೀಸ್‌ ಠಾಣೆಗಳಲ್ಲಿ ದಂಡ ಪಾವತಿಸಬಹುದು ಎಂದು ತಿಳಿಸಲಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page