ಹೊಸ ದಹಲಿ :–
ಪೆಟ್ರೋಲ್‌ಗೆ ಶೇ.೨೦ ರಷ್ಟು ಎಥೆನಾಲ್ ಸೇರಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ದೇಶಾದ್ಯಂತ ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಮಾತ್ರ ಮಾರಾಟ ಮಾಡುವುದು ಗ್ರಾಹಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ವಕೀಲ ಅಕ್ಷಯ್ ಮಲ್ಲೋತ್ರಾ ಹೇಳಿದ್ದಾರೆ.
ಎಥೆನಾಲ್ ಮಿಶ್ರಿತ ಪೆಟ್ರೋಲ್‌ನಿಂದಾಗಿ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.





