“ದೇಶದಲ್ಲಿ ಅತ್ಯಂತ ಕಡಿಮೆ ಆಸ್ತಿ ಹೊಂದಿರುವ ಬಡ ಮುಖ್ಯಮಂತ್ರಿ ಯಾರು‍” ?

ಬೆಂಗಳೂರು :–

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರಗಳ ಕುರಿತು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿ ಆರ್) ಇತ್ತೀಚೆಗೆ ಪ್ರಕಟಿಸಿರುವ ವರದಿಯು ಗಮನಾರ್ಹ ಸಂಗತಿಗಳನ್ನು ಹೊರಹಾಕಿದೆ.

2024ರಲ್ಲಿ ಭಾರತದ ಹಲವು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಗಳ ನಂತರ ಈ ವರದಿ ಬಿಡುಗಡೆ ಮಾಡಲಾಗಿದೆ. ಈ ವರದಿಯ ಪ್ರಕಾರವಾಗಿ ಭಾರತದ ಎಲ್ಲಾ ಮುಖ್ಯಮಂತ್ರಿಗಳಲ್ಲಿ “ಕಡಿಮೆ ಆಸ್ತಿ ಹೊಂದಿರುವವರು ಅಂದ್ರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ” ಎಂದು ಹೇಳಲಾಗಿದೆ. ಇನ್ನು ಅತಿ ಹೆಚ್ಚು ಆಸ್ತಿ ಹೊಂದಿರುವ ಶ್ರೀಮಂತ ಮುಖ್ಯಮಂತ್ರಿ ಯಾರು ಯರ್ಮ್ಬ ಕುತೂಹಲಕ್ಕೂ ಈ ವರದಿಯಲ್ಲಿ ಉತ್ತರವಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂಪಾಯಿ ಆಸ್ತಿ ಹೊಂದಿದ್ದಾರೆ. ಆ ಮೂಲಕ ದೇಶದ ಎಲ್ಲಾ ಮುಖ್ಯಮಂತ್ರಿಗಳಿಗಿಂತ ಅತೀ ಕಡಿಮೆ ಆಸ್ತಿ ಹೊಂದಿರುವರು ಸಿಎಂ ಎಂದು ಗುರುತಿಸಿಕೊಂಡಿದ್ದಾರೆ.

ಮತ್ತೊಂದೆಡೆ ನೆರೆಯ “ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅತಿ ಶ್ರೀಮಂತ ಮುಖ್ಯಮಂತ್ರಿಯಾಗಿದ್ದು”, ಬರೋಬ್ಬರಿ 931 ಕೋಟಿ ರೂಪಾಯಿ ಆಸ್ತಿಯೊಂದಿಗೆ ಇ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಇದ್ದು, ಅವರ ಆಸ್ತಿ ಮೌಲ್ಯ 332 ಕೋಟಿ ರೂ.ಗಳಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 51 ಕೋಟಿ ರೂ. ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page