ಬೆಂಗಳೂರು :–
ಅನರ್ಹರ ‘ಬಿಪಿಎಲ್’ ಕಾರ್ಡ್ ರದ್ದು ಮಾಡಿ ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,
ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತ ಮಾನದಂಡಗಳನ್ನು ಕಟ್ಟುನಿಟ್ಟಿನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು.
ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.





