ಬೆಂಗಳೂರು :–
ಬೆಂಗಳೂರಿನ ರಸ್ತೆಗುಂಡಿಗಳ ಕುರಿತು ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,
ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿವಾಸದ ಮುಂದಿನ ರಸ್ತೆಯಲ್ಲಿ ಎಷ್ಟು ಗುಂಡಿಗಳಿವೆಯೆಂದು ನೋಡಿ ಎಂದರು.
ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 1000 ಗುಂಡಿಗಳನ್ನು ಮುಚ್ಚುವ ಕೆಲಸ ಜಿಬಿಎ ಕಡೆಯಿಂದ ಆಗುತ್ತಿದೆ.
ಇದು ದೇಶದೆಲ್ಲೆಡೆ ಇರುವ ಸಮಸ್ಯೆ, ಕರ್ನಾಟಕದ ಸಮಸ್ಯೆ ಮಾತ್ರವಲ್ಲ ಎಂದು ಅವರು ಹೇಳಿದರು.





