ಬೆಂಗಳೂರು :–
ರಾಜ್ಯದ ಮುಖ್ಯಮಂತ
ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯವರ ಭೇಟಿಯ ನಂತರ,
ಮಾತನಾಡಿದ ಅವರು, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಎಂದು ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ.
ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.





