ಬೆಂಗಳೂರು :–
ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿವೆ.

ಈ ಬಗ್ಗೆ ಕೆಲ ಶಾಸಕರು ಸಿಎಂಗೆ ಪ್ರಸ್ತಾವನೆ ಕೂಡ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸರ್ಕಾರಿ-ಅನುದಾನಿತ ಶಾಲೆಗಳು, ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳಲ್ಲಿ ಆರೆಸ್ಸೆಸ್ ಶಾಖೆ ಹೆಸರಲ್ಲಿ ನಡೆಸುವ ಚಟುವಟಿಕೆ ನಿಷೇಧಿಸಬೇಕು ಎಂದು ಪ್ರಸ್ತಾವನೆಯಲ್ಲಿ ಒತ್ತಾಯಿಸಲಾಗಿದೆ ಎಂದು ವರದಿ ಹೇಳಲಾಗಿದೆ.





