ಬೆಂಗಳೂರು :–
ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ ಆರೋಪ ಸಂಬಂಧ ವಿಜಯಪುರ ಜಿಲ್ಲೆಗೆ ಮೂರು ತಿಂಗಳು ಕಾಲ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ಪ್ರವೇಶ ನಿರ್ಬಂಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು,
ಕಲಬುರಗಿ ಹೈಕೋರ್ಟ್ ಪೀಠ ಎತ್ತಿಹಿಡಿದಿದೆ. ಸ್ವಾಮೀಜಿಯಾದವರು ಸಾಮಾನ್ಯ ಮನುಷ್ಯರಿಗಿಂತಲೂ ಕೆಳಹಂತದ ಭಾಷೆ ಬಳಕೆ ಮಾಡಿದ್ದಾರೆ ಎಂದು ಪೀಠ ತಿಳಿಸಿದೆ.
ವಿಜಯಪುರ ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದರು.





