ಬೆಂಗಳೂರು :–
RSS ನ ಪಥಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದಡಿ ಪ್ರವೀಣ್ ಕುಮಾರ್ ಕೆ.ಪಿ ಎಂಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು(ಪಿಡಿಒ) ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲುಕಿನ ರೋಡಲಬಂಡಾ ಗ್ರಾಮದ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಡಾ.ಅರುಂಧತಿ ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.
ಅವರ ವಿರುದ್ದ ಕ್ರಮಕ್ಕೆ ಹಲವು ಸಂಘಟನೆಗಳು ಒತ್ತಾಯಿಸಿದ್ದವು.





