ಬೆಳಗಾವಿ :–
ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಜಾರಕಿಹೊಳಿ ಬಣ ಹಾಗೂ ಲಕ್ಷ್ಮಣ ಸವದಿ ಬಣಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಮತದಾನದ ವೇಳೆ ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಲಕ್ಷ್ಮಣ ಸವದಿ ಬೆಂಬಲಿಗರು ಗಲಾಟೆ ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಜಾರಕಿಹೊಳಿ ಬಣ ಹಾಗೂ ಸವದಿ ಬಣಗಳ ನಡುವೆ ವಾಗ್ವಾದ ನಡೆದು, ಹೊಡೆದಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಎರಡೂ ಬಣಗಳನ್ನು ಸಮಾಧಾನಪಡಿಸಿದ್ದಾರೆ.





