ಚಿಕ್ಕೋಡಿ :–
ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿ ಅ.೧೬ ರಿಂದ ಡಿಸೆಂಬರ್ ೨೫ವರೆಗೆ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದು ಎಂದು
ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ಹೆಳಿದರು.
ಪಟ್ಟಣದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ಆಗಸ್ಟ್.೧೬ ರಿಂದ ಅ.೩೦ರವರೆಗೆ ಮಹಿಳೆಯರ ಹಾಗೂ ಯುವಕರ ಸಮ್ಮೇಳನ, ನವೆಂಬರ್ ೧ ರಿಂದ ನವೆಂಬರ್.೧೫ ವರೆಗೆ ವ್ಯಾಪಾರಿಗಳು, ಸಣ್ಣ ಉದ್ದಿಮೆದಾರರ ಮತ್ತು ವೃತ್ತಿನಿರತ ಸಮ್ಮೇಳನ ಆಯೋಜಿಸಲಾಗಿದೆ. ನ.೧ ರಿಂದ ನ.೧೫ರವರೆಗೆ ಕಾಲೇಜು ಮಟ್ಟದಲ್ಲಿ ಸ್ವದೇಶಿ ಸಂಕಲ್ಪ ಸಮ್ಮೇಳನ ಹಾಗೂ ನ.೧೬ ರಿಂದ ನ.೩೦ರವರೆಗೆ ಸ್ವದೇಶಿ ಮೇಳ ಹಮ್ಮಿಕೊಳ್ಳಲಾಗಿದೆ. ಡಿ.೧ರಿಂದ ಡಿ.೨೫ರವರೆಗೆ ಆತ್ಮನಿರ್ಭರ ಭಾರತ ಸಂಕಲ್ಪ ರಥಯಾತ್ರೆ ಹಾಗೂ ಪಾದಯಾತ್ರೆಯನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಎಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿ ಮನೆಯೂ ಸ್ವದೇಶಿ-ಮನೆ ಮನೆಯೂ ಸ್ವದೇಶಿ ಎಂಬ ಘೋಷಣೆಯನ್ನು ಸಾರ್ಥಕಗೊಳಿಸಲು ನಿರ್ಧರಿಸಲಾಗಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡರು.





