ಚಿಕ್ಕೋಡಿ :–
ದಶಮಾನಗಳ ಜಿಲ್ಲಾ ಕನಸನ್ನು ಡಿಸೆಂಬರ್ ೩೧ ರೊಳಗೆ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಸಂಸದೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಪದಾಧಿಕಾರಿಗಳು
ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷರಾದ ಎಸ್.ವೈ. ಹಂಜಿ ಮತ್ತು ಕಾರ್ಯದರ್ಶಿ ರುದ್ರಪ್ಪ ಸಂಗಪಗೋಳ ನೇತೃತ್ವದ ತಂಡ ಪಟ್ಟಣದ ಸಂಸದರ ಕಚೇರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲೆ ರಚಣೆಗೆ ರಸ್ತೆಗಳನ್ನು ತಡೆದು ಪ್ರತಿಭಟನೆಗಳು ನಡೆದವು.ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಈ ಹಿಂದೆ ಸಿ.ಎಂ ಆಗಿದ್ದಾಗ ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಒಪ್ಪಿಕೊಂಡಿದ್ದಾರೆ. ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂರೆ ಜಿಲ್ಲೆಯ ಎಲ್ಲಾ ನಾಯಕರು ಚಿಕ್ಕೋಡಿ ಜಿಲ್ಲೆಯನ್ನು ವಿಭಜಿಸಲು ಒಪ್ಪಿಕೊಂಡರು.
ಕೇಂದ್ರ ಸರ್ಕಾರವು ಡಿಸೆಂಬರ್ ೩೧ ರೊಳಗೆ ಎಲ್ಲಾ ರಾಜ್ಯಗಳಿಗೆ ಹೊಸ ಕಂದಾಯ ಪ್ರದೇಶಗಳು, ತಾಲೂಕುಗಳು, ಜಿಲ್ಲಾ ಕೇಂದ್ರಗಳನ್ನು ರಚಿಸುವಂತೆ ಸೂಚಿಸಿದ್ದು, ಕರ್ನಾಟಕ ಸರ್ಕಾರವು ತಕ್ಷಣವೇ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ, ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಹೇರಿ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸುವಂತೆ ಒತ್ತಾಯಿಸುವಂತೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಜಯ ಪಾಟೀಲ, ಸುರೇಶ ಬ್ಯಾಕುಡೆ, ಅಶೋಕ ಪಾಟೀಲ ಸೇರಿದಂತೆ ಹೊಇರಾಟ ಸಮೀತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.





