ಬೆಂಗಳೂರು :–
ರಾಜ್ಯದ ಮುಂದಿನ ಸಿಎಂ ಯಾರು ಎಂಬ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿ ಎಂ ಸಿದ್ದರಾಮಯ್ಯ ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ, ಇಂತಹ ಸಂದರ್ಭದಲ್ಲಿ ನಮಗೆ ಮಾರ್ಗದರ್ಶನ ಮಾಡಿ, ಮುನ್ನಡೆಸುವ ಅಂತಹ ಗುಣ ಸತೀಶ್ ಜಾರಕಿಹೊಳಿ ಬಳಿ ಇದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ,
ಬಳಿಕ ಡಿಸಿಎಂ ಶಿವಕುಮಾರ್ ಅವರಿಂದ ಈ ಹೇಳಿಕೆ ಬಂದಿದೆ. ಯತೀಂದ್ರ ಹೇಳಿಕೆ ಕುರಿತು ಅವರನ್ನೇ ಕೇಳಿ ಎಂದು ಮಾಧ್ಯಮಗಳಿಗೆ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.





