ಬೆಂಗಳೂರು :–
“ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕೆಂದು ಪೊಲೀಸರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಡಿಜಿ ಮತ್ತು ಐಜಿಪಿ”

ಡಿಜಿ ಮತ್ತು ಐಜಿಪಿ ಎಂ.ಎ.ಸಲೀಂ ಅಹಮದ್ ಅವರು ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಹಿನ್ನೆಲೆಯನ್ನು ಗಮನಿಸಬಾರದು. ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು. “ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ.

ಮಹಿಳೆಯರನ್ನು ಸಂಜೆ 6 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಗೂ ಹೇಳಿಕೆಯನ್ನು ನೀಡಲು ಕರೆತರಬಾರದು” ಎಂದು ಹಲವು ವಿಚಾರಗಳನ್ನು ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದ್ದಾರೆ.





