ಬೆಂಗಳೂರು :–
ಹೈಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಸಿದ್ದರಾಮಯ್ಯ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಕೆಲವರು ತಾವೂ ಮುಖ್ಯಮಂತ್ರಿ ಆಕಾಂಕ್ಷೆ ಎಂದು ಹೇಳುತ್ತಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,
ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗಲ್ಲ. ಆಕಾಂಕ್ಷೆ ವ್ಯಕ್ತಪಡಿಸುವುದು ಅವರ ಹಕ್ಕು, ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.





