ಬೆಂಗಳೂರು :–
ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನು ೫ ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ನಾವು ಯಾವುದೇ ಅವಧಿ ನಿಗದಿ ಮಾಡಿ ಆಯ್ಕೆ ಮಾಡಿಲ್ಲ.
ಆಯ್ಕೆ ಮಾಡುವಾಗ ಎರಡೂವರೆ ವರ್ಷಕ್ಕೆ ಸಿಎಂ ಅಂತಲೂ ಹೇಳಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ತೆರೆ ಎಳೆಯಬೇಕೆಂದು ಹೈಕಮಾಂಡ್‌ಗೆ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.





