ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೈನಾಲಜಿ ಮತ್ತು ಮೆಟಾಬಾಲಿಸಂನಲ್ಲಿ 2023 ರಲ್ಲಿ ಪ್ರಕಟವಾದ ಅಧ್ಯಯನವು ತಡವಾಗಿ ಊಟ ಮಾಡುವುದರಿಂದ ಮಧುಮೇಹ ಮತ್ತು ಹೃದ್ರೋಗದ ಅಪಾಯ ಹೆಚ್ಚಾಗುತ್ತದೆ ಎಂದು ತಿಳಿಸುತ್ತದೆ.
ತಡವಾಗಿ ಊಟ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ ಹಾಗೂ ಕೊಲೆಸ್ಟ್ರಾಲ್ ಮೇಲೆ ಪರಿಣಾಮ ಬೀರುತ್ತದೆ.
ನಿದ್ರೆಗೆ ಮುನ್ನ ಆಹಾರ ಜೀರ್ಣವಾಗದಿದ್ದರೆ, ಅದು ಮೇದೋಜೀರಕ ಗ್ರಂಥಿಯನ್ನು ಆಯಾಸಗೊಳಿಸುತ್ತದೆ ಮತ್ತು ಕಾಲಾನಂತರದಲ್ಲಿ ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗಬಹುದು ಎಂದು ಹೇಳುತ್ತಾರೆ.





