ಬೆಳಗಾವಿ :–
ಬೆಳಗಾವಿ ನಗರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಜತೆಗೆ ಮಾಳಮಾರುತಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಸೆಲ್ಪಿ ಕ್ಲಿಕ್ಕಿಸಿಕೊಂಡ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.
ಕರಾಳ ದಿನಾಚರಣೆಯಲ್ಲಿ ಭಾಗಿಯಾಗದಂತೆ ಶಳಕೆಗೆ ಎಚ್ಚರಿಕೆ ನೀಡಲಾಗಿತ್ತು. ಆತನ ನಿವಾಸ ನಮ್ಮ ಠಾಣೆಯ ವ್ಯಾಪ್ತಿಯಲ್ಲಿ ಇರುವ ಕಾರಣ,
ಶಳಕೆ ಸಂಭಾಜಿ ಉದ್ಯಾನಕ್ಕೆ ಬಂದಾಗ ಮೇಲಧಿಕಾರಿಗಳಿಗೆ ವರದಿ ಮಾಡಲು ಫೋಟೋ ತೆಗೆದಿದ್ದೆ ಎಂದು ಕಾಲಿಮಿರ್ಚಿ ತಿಳಿಸಿದ್ದಾರೆ.





