ಬೆಂಗಳೂರು :–
ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇಲ್ಲ, ಬೇಡಿಕೆಗೆ ಅನುಸಾರ ವಿದ್ಯುತ್ ಹಂಚಿಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ರಾಜ್ಯದ ವಿವಿಧೆಡೆ ಸೌರಶಕ್ತಿ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ೨೪೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಪ್ರಯತ್ನಗಳು ನಡೆಯುತ್ತಿವೆ,
ಇದೇ ವೇಳೆ ಪರಿಣಾಮಕಾರಿ ನಿರ್ವಹಣೆ ಹಾಗೂ ವಿತರಣಾ ಖರ್ಚನ್ನು ತಗ್ಗಿಸಲು ಇಂಧನ ಇಲಾಖೆಯು ೧೦೦ ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ಅವರು ತಿಳಿಸಿದರು..





