ಚಿಕ್ಕೋಡಿ :–
ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥ ಕೊಂಡ ಮಕ್ಕಳ ಆರೋಗ್ಯವನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿಚಾರಿಸಿ ದರು.ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ತಿಳಿಸಿದರು.
ನಂತರ ಮಾತನಾಡಿದ ಅವರು ಇಂತಹ ಘಟನೆ ಮರುಕಳಿಸದಂತೆ ಶಿಕ್ಷಕರು ಹಾಗೂ ವಾರ್ಡನ ಸಿಬ್ಬಂದಿಗಳು ಮಕ್ಕಳ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು ಎಂದ ಅವರು, ವಾರ್ಡನ್ ಹಾಗೂ ಸಿಬ್ಬಂದಿಗೆ ಈ ರೀತಿ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಸತಿ ಶಾಲೆಯಲ್ಲಿ ಅಡುಗೆಗೆ ಬಳಸುತ್ತಿರುವ ವಸ್ತು ಸೇರಿದಂತೆ ಕುಡಿಯುವ ನೀರಿನ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಕ್ಕಳ ಹೀತ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂಪಗಾವಿ, ಬುಡಾ ಅಧ್ಯಕ್ಷ ಲಕ್ಷಣರಾವ ಚಿಂಗಳೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸೇರಿದಂತೆ ವಸತಿ ಶಾಲೆ ಪ್ರಾಚಾರ್ಯ ಹಾಗೂ ವಾರ್ಡನ್ ಸಿಬ್ಬಂದಿಗಳು ಇದ್ದರು.





