ಚಿಕ್ಕೋಡಿ
ಪಟ್ಟಣದ ಪ್ರತಿಷ್ಟಿತ ಕೆ.ಎಲ್.ಇ. ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಭಾರತ ಸರ್ಕಾರದ ಸಂವಹನ ಸಚಿವಾಲಯ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆ, ಚಿಕ್ಕೊಡಿ ಇವರ ಸಹಯೋಗದಲ್ಲಿ ದಿನಾಂಕ ೩೧.೧೦.೨೦೨೫ ರಂದು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಕೆ.ಎಲ್.ಇ. ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಕು. ಪೂರ್ಣಾನಂದ ಘಾಳಿ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ನಗದು ಬಹುಮಾನ, ಮೊಮೆಂಟೋ ಮತ್ತು ಪ್ರಶಸ್ತಿ ಪತ್ರ ಪಡೆದುಕೊಂಡಿರುತ್ತಾರೆ.
ಕೆ.ಎಲ್.ಇ. ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಡಿ.ಬಿ. ಸೊಲಾಪುರೆ ಇವರು ಮಾರ್ಗದರ್ಶನ ಮಾಡಿರುತ್ತಾರೆ.
ಇವರಿಗೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾದ್ಯಕ್ಷರು, ಅದ್ಯಕ್ಷರು ಹಾಗೂ ಸದಸ್ಯರು ಮತ್ತು ಸ್ಥಾನಿಕ ಆಡಳಿತ ಮಂಡಳಿಯ ಅದ್ಯಕ್ಷರು, ಸದಸ್ಯರು ಹಾಗೂ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಎಲ್ಲ ಭೊದಕ ಮತ್ತು ಭೋದಕೇತರ ಸಿಬ್ಬಂದಿಯವರು ಶುಭ ಕೋರಿರುತ್ತಾರೆ.





