ಬೆಂಗಳೂರು :–
ನಾಳೆ ಬೆಳಿಗ್ಗೆ ೧೧.೦೦ ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರುಗಳ ಜತೆ ಮತ್ತು ಮಧ್ಯಾಹ್ನ ೧.೦೦ ಗಂಟೆಗೆ ರೈತ ಮುಖಂಡರುಗಳ ಜೊತೆ ಚರ್ಚಿಸಲು ಸಭೆ ಕರೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಸದರಿ ಸಭೆಯಲ್ಲಿ ಎರಡೂ ಕಡೆಯ ಅಹವಾಲುಗಳನ್ನು ಆಲಿಸಿ ರಾಜ್ಯ ಸರಕಾರವು ತನ್ನ ಮಿತಿಯಲ್ಲಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.





