ಬೆಳಗಾವಿ :–
ಕ್ವಿಂಟಾಲ್ ಕಬ್ಬಿಗೆ ₹3500 ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಇದರಿಂದ ಕೋಪಗೊಂಡ ರೈತರು ಲಾಠಿ ಚಾರ್ಜ್‌ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸಾವಿರಾರು ರೈತರು ಟ್ರ್ಯಾಕ್ಟರ್ ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದರಿಂದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದಾರೆ.





