ಬೆಳಗಾವಿ :–
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಮನವಿಗೆ ಸ್ಪಂದಿಸಿದ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಮುಂದೂಡಿದ್ದಾರೆ.
ಪ್ರತಿ ಟನ್ ಕಬ್ಬಿಗೆ ₹ ೩,೫೦೦ ದರ ನಿಗದಿ ಮಾಡಲು ಆಗ್ರಹಿಸಿ ಲಕ್ಷಾಂತರ ರೈತರು ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
“ಶನಿವಾರ ಸಂಜೆಯೊಳಗೆ ನಿರ್ಧಾರ ಪ್ರಕಟಿಸಬೇಕು, ಇಲ್ಲದಿದ್ದರೆ ನ. 9ರಂದು ಹೆದ್ದಾರಿ ಬಂದ್” ಮಾಡುವುದಾಗಿ ರೈತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.





