ಬೆಂಗಳೂರು :–
ರಾಜ್ಯದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಈವರೆಗೆ ರಾಜ್ಯದಲ್ಲಿ ೪.೦೯ ಲಕ್ಷ ಬಿಪಿಎಲ್(BPL) ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ವರದಿಯಾಗಿದೆ.

ಹಂತ ಹಂತವಾಗಿ ೧೩.೮೭ ಲಕ್ಷ ಕಾರ್ಡ್ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಪೈಕಿ ಕೇಂದ್ರ ಸರ್ಕಾರ ಗುರುತಿಸಿರುವ ೭.೭೬ ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳು ಸೇರಿವೆ ಎಂದು ವರದಿ ತಿಳಿಸಿದೆ. “ಕಾರ್ಡ್‌ಗಳು ತಪ್ಪಾಗಿ ರದ್ದಾದರೆ” ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.





