ಬೆಂಗಳೂರು :–
ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಕಾಗವಾಡ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ.
ಆಡಳಿತಾತ್ಮಕ ಅನುಕೂಲಕ್ಕಾಗಿ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ ೧೫ ಜಿಲ್ಲೆಗಳನ್ನು ಒಳಗೊಂಡ ಹೊಸ ರಾಜ್ಯದ ರಚನೆಗೆ ನನ್ನ ಆಗ್ರಹವಿದೆ.
ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





