ಬೆಂಗಳೂರು :–
ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಶಾಸಕರ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು “ಆಕ್ಷೇಪಿಸಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲ್ಲಿಸಿರುವ ಪಿಐಎಲ್” ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಶ್ರೀನಿವಾಸಪುರ ಪುರಸಭೆ ವ್ಯಾಪ್ತಿಯ ಗ್ರಾಮಗಳು ಹಾಗೂ ಹೊಸದಾಗಿ ಸೇರ್ಪಡೆಗೊಂಡ ವಾರ್ಡ್‌ಗಳ ಅಭಿವೃದ್ಧಿಗೆ ೨೦೧೯ ರಲ್ಲಿ ಮಂಜೂರು ಮಾಡಲಾದ ಅನುದಾನವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸೀಮಿತವಾಗಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.





