ಬೆಂಗಳೂರು :–
ಕರ್ನಾಟಕ ರಾಜ್ಯದಲ್ಲಿ ಆರು ಸಾವಿರ ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದರಂತೆ ೬ ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಬೆಂಗಳೂರಿನಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಂದೇ ವರ್ಷದಲ್ಲಿ ಒಟ್ಟಿಗೆ ೯೦೦ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಅದರಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ, 6ನೇ ತರಗತಿಯಿಂದ ಕೌಶಲ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ.
ರಾಜ್ಯದಲ್ಲಿ ಪ್ರಸ್ತುತ ೩೦೮ ಕೆಪಿಎಸ್ ಶಾಲೆಗಳಿದ್ದು, ದ್ವಿಭಾಷಾ ಮಾಧ್ಯಮಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.





