ಮೈಸೂರು :–
“ಅಧಿಕಾರಿಗಳಿಗೆ ಸಿಎಂ ತರಾಟೆ ಜನರ ಸಮಸ್ಯೆ ಬಗೆಹರಿಸಿ”
ಮೈಸೂರಿನಲ್ಲಿ ಸತತ ೧೦ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ನಡೆಸಿದ ಮುಖ್ಯಮಂತ್ರಿಗಳು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ನನ್ನ ಸ್ವಂತ ಜಿಲ್ಲೆಯಾದ ಮೈಸೂರಿನ ಜನ ತಮ್ಮ ಸಣ್ಣಪುಟ್ಟ ಕಂದಾಯ ಇಲಾಖೆಯ ಸಮಸ್ಯೆಗಳನ್ನು” ಬಗೆಹರಿಸಿಕೊಳ್ಳಲು ಬೆಂಗಳೂರಿಗೆ ಬರುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಜನರು ರಾತ್ರಿ ಹಗಲು ಎನ್ನದೆ ನನಗಾಗಿ ಕಾಯುವುದನ್ನು ನೋಡಿದರೆ ಬೇಸರವಾಗುತ್ತದೆ ಎಂದು ಕಿಡಿಕಾರಿದರು.
ಅನಗತ್ಯವಾಗಿ ಜನರನ್ನು ಸರಕಾರಿ ಕಚೇರಿಗಳಿಗೆ ಅಲೆದಾಡಿಸುವುದು ಒಂದು ಅಪರಾಧ. “ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಾಲೂಕು ಕೇಂದ್ರಗಳಲ್ಲೇ ವಾಸ ಮಾಡಬೇಕು.”
ಜನರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಮುತುವರ್ಜಿ ವಹಿಸಬೇಕು. ನೀವು ಸರಿಯಾಗಿ ಕೆಲಸ ಮಾಡಿದರೆ ಜನ ನನ್ನ ಬಳಿ ಬರುವುದು ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.





