“ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ಶಾಸಕ ರಾಜು ಕಾಗೆ ಹೇಳಿಕೆಗೆ ಜಿಲ್ಲಾ ಹೋರಾಟ ಸಮಿತಿಯ ಬೆಂಬಲ ವ್ಯಕ್ತಪಡಿಸಿದ್ದಾರೆ‌”

ಚಿಕ್ಕೋಡಿ :–

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ಕಾಗವಾಡ ಶಾಸಕ ರಾಜು ಕಾಗೆ ಹೇಳಿಕೆಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸದಸ್ಯರುಗಳು ಬೆಂಬಲ ವ್ಯಕ್ತಪಡಿಸಿದ್ದಾರೆ‌.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಸದಸ್ಯರು ಹಲವು ದಶಕಗಳಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಹೋರಾಟ ದಶಕಗಳಿಂದ ನಡೆಯುತ್ತಿದೆ. ಎಷ್ಟೋ ಸರ್ಕಾರಗಳು ಬಂದೂ ಹೋದರೂ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲು ಆಸಕ್ತಿ ತೋರುತ್ತಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ, ಚಿಕ್ಕೋಡಿ ಕೂಡಾ ಜಿಲ್ಲೆ ಆಗುತ್ತದೆ ಎಂದು ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾದ ಸಂಜು ಬಡಿಗೇರ ಹೇಳಿದರು.

ಬಳಿಕ ಸಮಾಜ ಸೇವಕರು ಹಾಗೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ ಮಾತನಾಡಿ ಲಾಗವಾಡ ಶಾಸಕ ರಾಜು ಕಾಗೆ ಅವರು ಪ್ರತ್ಯೇಕ ರಾಜ್ಯದ ಕುರಿತು ಹೇಳಿಕೆ ನೀಡಿದ್ದು ಸ್ವಾಗಾತಾರ್ಹವಾಗಿದೆ, ಉತ್ತರ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಆಗುತ್ತಿದೆ. ದಕ್ಷಿಣ ಕರ್ನಾಟಕದಲ್ಲಿ ೧೦ ಕಿಮೀ ಗೊಂದು ಜಿಲ್ಲೆ ಇವೆ. ಆದ್ರೆ “ಬೆಳಗಾವಿ ಜಿಲ್ಲೆಯು ಇಷ್ಟೊಂದು ದೊಡ್ಡದು” ಇದ್ರು ಕೂಡಾ ಯಾಕೆ ವಿಭಜನೆ ಆಗುತ್ತಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರುದ್ರಯ್ಯ ಹಿರೇಮಠ, ಅಮೂಲ ನಾವಿ, ಸಿದ್ರಾಮ ಕರಗಾವೆ, ರಮೇಶ ಡಂಗೇರ, ಜಕ್ಕಪ್ಪಾ ಬಿಳಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share this post:

Leave a Reply

Your email address will not be published. Required fields are marked *

You cannot copy content of this page