ಬೆಳಗಾವಿ :–
ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರವಿವಾರ ನಡೆದ ಕಾರ್ಯಕ್ರಮದಲ್ಲಿ ಚಿಕ್ಕೋಡಿ ತಾಲೂಕಿನ ಕೆಂಚನಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕಲ್ಮೇಶ್ವರ ಖಡಕಭಾವಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂದರ್ಭದಲ್ಲಿ ಅರಳಿಕಟ್ಟಿ ವಿರಕ್ತಮಠದ ಶಿವಮೂರ್ತಿ ಸ್ವಾಮೀಜಿ, ಬೆಳಗಾವಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ಆರ್. ಕೆ, ಲಕ್ಷ್ಮಣ ಮೆಚ್ಚನ್ನವರ, ಅರ್ಜುನ ನಾಯಿಕವಾಡಿ, ನವೀನ ಗಂಗರೆಡ್ಡಿ, ಮೈತ್ರೇಯಣಿ ಗದಿಗೆಪ್ಪಗೌಡರ, ಕೆ. ಟಿ. ಕಾಂಬಳೆ, ಭಾರತಿ ಖಡಕಭಾವಿ ಇದ್ದರು.





