ತುಮಕೂರು :–
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಿಂದಿನ ಬಜೆಟ್‌ನಲ್ಲಿ ₹ ೧ ಸಾವಿರ ಗೌರವ ಧನ ಹೆಚ್ಚಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಮತ್ತೆ ₹೧ ಸಾವಿರ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾರ್ಳ್ಳ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳದ ಕುರಿತು ಸಿಎಂ ಸಿದ್ದರಾಮಯ್ಯ ಜತೆಗೆ ಚರ್ಚಿಸಲಾಗಿದೆ ಎಂದರು.
ಶೀಘ್ರದಲ್ಲೇ “೨ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ” ಮಾಡಲಾಗುವುದು ಎಂದು ಇದೇ ವೇಳೆ ಹೆಬ್ಬಾಳ್ಳರ್ ಹೇಳಿದ್ದಾರೆ.





