ಬೆಂಗಳೂರು :–
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ವಿಚಾರಣಾಧೀನ ಕೈದಿಗಳಾಗಿರುವ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿದ್ದಾರೆ.
ಸಂಜೆ ೪.೩೦ ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು ಎಂದು ವರದಿಯಲ್ಲಿ ತಿಳಿಸಿಲಾಗಿದೆ.





