ಮೈಸೊರು :–
ಗ್ರಹಗತಿಗಳ ಪ್ರಕಾರ, ಇನ್ನೆರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು, ಇಲ್ಲದಿದ್ದರೆ ಈ ಜನ್ಮದಲ್ಲಿ ಆ ಯೋಗವಿಲ್ಲ ಎಂದು ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಭವಿಷ್ಯ ನುಡಿದಿದ್ದಾರೆ.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇವಿ ಕೂಡ ಬಲಗಡೆಯಿಂದ ಹೂ ವರ ಕೊಟ್ಟು ಆಶಿರ್ವಾದ ಮಾಡಿದ್ದಾಳೆ. ಯಾರು ಏನೇ ಮಾಡಿದರೂ ದೈವ ಸಂಕಲ್ಪದ ಮುಂದೆ ಯಾವುದೂ ನಡೆಯುವುದಿಲ್ಲ ಎಂದು ಹೇಳಿದರು.





