ಬೆಂಗಳೂರು :–
೨೦೨೮ ರ ವೇಳೆಗೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು,
ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ ಮಸೂದೆ ಮಂಡಿಸಲು ಮುಂದಾಗಿದೆ ಎಂದು ವರದಿಯಾಗಿದೆ.
ವೇತನ, ಪಿಎಫ್ (ಪ್ರಾವಿಡೆಂಟ್ ಫಂಡ್), ಇಎಸ್‌ಐ ಹಾಗೂ ಇನ್ನಿತರ ಸವಲತ್ತುಗಳ ಪಾವತಿಯಲ್ಲಿ ವಿಳಂಬ,೮
ಕಡಿಮೆ ಪಾವತಿ ಮೂಲಕ ಖಾಸಗಿ ಏಜೆನ್ಸಿಗಳು ಶೋಷಣೆ ಮಾಡುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.





