ಬೆಳಗಾವಿ :–
ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ ನಡೆಸಿದೆ.
ಅವಿಶ್ವಾಸ ನಿರ್ಣಯ ಮಂಡನೆಗೂ ಮುನ್ನ ನಾವು ಮಿತ್ರ ಪಕ್ಷ ಜೆಡಿಎಸ್ ಜತೆ ಈ ವಿಷಯವನ್ನು ಚರ್ಚಿಸುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದರೂ ಸರ್ಕಾರ ರಚಿಸಲು ಬಿಜೆಪಿ ಹಕ್ಕು ಮಂಡಿಸುವುದಿಲ್ಲ ಎಂದು ಅವರು ಹೇಳಿದರು.





