ಬೆಂಗಳೂರು :–
ಶೀಘ್ರದಲ್ಲೇ ರಾಜ್ಯದ ಸರ್ಕಾರಿ ಶಾಲೆಗಳಿಗೆ ೧೨ ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ ೬ ಸಾವಿರ ಸೇರಿ ಒಟ್ಟು ೧೮ ಸಾವಿರ ಶಿಕ್ಷರನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಯಾವುದೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೆ ಮುಗಿಯಲಿದೆ” ಎಂದು ಅವರು ಹೇಳಿದರು. ಈ ಹಿಂದಿನ ಸರ್ಕಾರದವರು ಕೇವಲ ೫ ಸಾವಿರದೊಳಗೆ ಶಿಕ್ಷಕರ ನೇಮಕಾತಿ ಮಾಡಿದ್ದರು ಎಂದು ಅವರು ತಿಳಿಸಿದರು.





