ಬೆಂಗಳೂರು :–
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಹಾವೇರಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿದೆ. ರಾಜ್ಯ ಸರ್ಕಾರವು ಒಬ್ಬ ರೈತನಿಂದ 5 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಆದೇಶ ಹೊರಡಿಸಿದ್ದು, ಆದರೆ ‘ಉಳಿದ ಬೆಳೆಯನ್ನು ಏನು ಮಾಡಬೇಕು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.
ಕೊಪ್ಪಳ ಹಾಗೂ ವಿಜಯನಗರದಲ್ಲಿಯೂ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದರೆ, ಗದಗ ಜಿಲ್ಲೆಯ ಲಕ್ಷ್ಮೀಶ್ವರದಲ್ಲಿ ಜೋಳ ಖರೀದಿ ಕೇಂದ್ರ ಆರಂಭಿಸಿದ್ದರಿಂದ ರೈತರು ಸಂಭ್ರಮಾಚರಣೆಯಲ್ಲಿ ಇದ್ದಾರೆ.





