ಬೆಳಗಾವಿ :–
ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಬಡ್ತಿ ನೀಡಲು ಸಂಪುಟ ನಿರ್ಧರಿಸಿದೆ.
₹307 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ಐಟಿಬಿಟಿ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ.
ಹೊಸ ವಾಹನ ಖರೀದಿದಾರರಿಗೆ ಶೇಕಡವಾರು ಸೆಸ್ ಜಾರಿಗೊಳಿಸಲು ರಸ್ತೆ ಸುರಕ್ಷತಾ ತಿದ್ದುಪಡಿ ವಿಧೇಯಕ, ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.





