“ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ”

ಬೆಳಗಾವಿ :–

ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಚಾಕುರ್ಕ‌ರ್ ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿ ೯೦ ನೇ ವಯಸ್ಸಿನಲ್ಲಿ ನಿಧನರಾದರು. ಅಲ್ಪಾವಧಿಯ ಅನಾರೋಗ್ಯದ ನಂತರ ಅವರು ನಿಧನರಾದರು ಎಂದು ಅವರ ಕುಟುಂಬ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಹೇಳಿದೆ.

ಪಾಟೀಲ್ ಬೆಳಿಗ್ಗೆ ೬:೩೦ ರ ಸುಮಾರಿಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಇತರರು ಅಂತಿಮ ದರ್ಶನಕ್ಕಾಗಿ ಮನೆಯ ಹೊರಗೆ ಜನರು ಜಮಾಯಿಸಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page