ಬೆಂಗಳೂರು :–
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ನೈಟ್ರೋಪ್ಯುರಾನ್ ಇದೆ ಎಂಬ ವದಂತಿ ಹಿನ್ನೆಲೆ ರಾಜ್ಯದ ಎಲ್ಲಾ ಬ್ರಾಂಡ್‌ಗಳ ಮೊಟ್ಟೆಗಳ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕಳೆದ 6 ತಿಂಗಳ ಹಿಂದೆ ಆಹಾರ ಸುರಕ್ಷತಾ ಇಲಾಖೆ ನಡೆಸಿದ್ದ ಟೆಸ್ಟ್‌ನಲ್ಲಿ ಮೊಟ್ಟೆ ಹಾನಿಕಾರವಲ್ಲ ಎಂಬ ವರದಿ ಬಂದಿದೆ.





