“ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ೯೫ನೇ ವಯಸ್ಸಿನಲ್ಲಿ ನಿಧನ”

ಬೆಂಗಳೂರು :–

ದಾವಣಗೆರೆ ದಕ್ಷಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ೯೫ ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಭಾನುವಾರ ಸಂಜೆ ನಿಧನರಾಗಿದ್ದಾರೆ.

೬ ಬಾರಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಶಿವಶಂಕರಪ್ಪ ಅವರ ಪುತ್ರ ಮಲ್ಲಿಕಾರ್ಜುನ್ ರವರು ತೋಟಗಾರಿಕೆ ಸಚಿವರಾಗಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page