ಬೆಳಗಾವಿ :–
ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಎಂದು ಹೇಳಬಾರದು, ಇತಿಹಾಸದ ಬಗ್ಗೆ ಸುಳ್ಳು ಹೇಳಬಾರದು ಎಂದು ಬೆಳಗಾವಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿದರು.
ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು, ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.
ನಾನು ಮರಾಠ ಸಮುದಾಯದವನೇ ಎಂದು ಅವರು ಹೇಳಿದರು. ಮರಾಠರ ಬಗ್ಗೆ ಎಲ್ಲಾ ಮಾತನಾಡುತ್ತಾರೆ, ಯಾರೂ ಗ್ರಾಮ ಪಂಚಾಯಿತಿಯಿಂದ ಹಿಡಿದು ಬೇರೆ ಸ್ಥಾನಕ್ಕೆ ಟಿಕೆಟ್ ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ.





