“ವಿಧಾನ ಮಂಡಲದ ಉಭಯ ಸದನಗಳಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಎರಡೂ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಿಕೆ”

ಬೆಳಗಾವಿ :–

ವಿಧಾನ ಮಂಡಲದ ಉಭಯ ಸದನಗಳಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸೋಮವಾರ ಸಂತಾಪ ಸೂಚಿಸಿ, ಎರಡೂ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯ ಮಂಡಿಸಿದ ಸಭಾಧ್ಯಕ್ಷ ಯು.ಟಿ. ಖಾದರ್, ಎಷ್ಟೇ ಜಟಿಲವಾದ ಸಮಸ್ಯೆಯನ್ನೂ ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು,

ಅವರ ಜೀವನವೇ ಒಂದು ಸಂದೇಶ ಎಂದರು. “ಶಿವಶಂಕರಪ್ಪನವರು ದಾವಣಗೆರೆಯನ್ನು ವಿದ್ಯಾಕಾಶಿಯಾಗಿ ರೂಪಿಸಿದರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Share this post:

Leave a Reply

Your email address will not be published. Required fields are marked *

You cannot copy content of this page