ಬೆಳಗಾವಿ :–
ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಸ್ಪೀಕರ್ ಯು.ಟಿ.ಖಾದರ್‌ಗೆ ಪತ್ರ ಬರೆದಿದ್ದಾರೆ.
ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ 19ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು, ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ ಎಂದು ಅಶೋಕ್ ತಿಳಿಸಿದ್ದಾರೆ.





